ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ತೋರುವಂತಿಲ್ಲ.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ಇದನ್ನು ಮನವಿ ಎಂದಾದೂ ಅಥವಾ ಎಚ್ಚರಿಕೆ ಎಂದಾದರೂ ಪರಿಗಣಿಸಿ ಎಂದಿದ್ದಾರೆ.
ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು ಎಂದು ತಿಳಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು ಎಂದರು.
ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಪಾಲಿಕೆ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ತಿಳಿಸಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…