ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯಪಾಲರ ನಡೆ ಇದೇ ಮೊದಲು ಅಲ್ಲ. ಹಿಂದೆ ಹಂಸರಾಜ್ ಭಾರದ್ವಾಜ್ ಅವರು ಮಾಡಿದ್ದರು. ಕಾಂಗ್ರೆಸ್ ಗೂಂಡಾಗಿರಿ ಮಾಡಿದ್ದಾರೆ. ರಾಜ್ಯಪಾಲರಿಗೆ ಘೇರಾವ್ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇವರನ್ನು ಸದನದಿಂದ ಹೊರಗೆ ಹಾಕಬೇಕು. ಸ್ವತಃ ಕಾನೂನು ಮಂತ್ರಿಯೇ ಅಡ್ಡಿಪಡಿಸಿದ್ದಾರೆ. ಸಭಾಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇನ್ನು ರಾಜ್ಯಪಾಲರಿಗೆ ಯಾರೆಲ್ಲಾ ಅಗೌರವ ತೋರಿಸಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮೆಚ್ಚಿಸಲು ಮಾಡಿರುವ ಕುತಂತ್ರ ಇದು. ಇದು ಕಾಂಗ್ರೆಸನ ಗೂಂಡಾ ಸಂಸ್ಕೃತಿಯ ಭಾಗ. ಬಿಜೆಪಿ ಹೋರಾಟ ಮುಂದುವರಿಯುತ್ತದೆ ಎಂದು ಕಿಡಿಕಾರಿದರು.





