ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ, ವಕ್ಛ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಎಂ.ವೈ.ಪಾಟೀಲ್ ರವರ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ 1,12,860 ಎಕರೆ ವಕ್ಛ್ ಆಸ್ತಿ ಇದೆ. ಈ ಆಸ್ತಿ ಸರ್ಕಾರದಿಂದ ಬಂದದ್ದಲ್ಲ. ಖಾಸಗಿ ವ್ಯಕ್ತಿಗಳು ಸಮಾಜದ ಅಭಿವೃದ್ಧಿಗೆ ಕೊಟ್ಟಿದ್ದು. ಇದರಲ್ಲಿ ಸುಮಾರು 17 ಸಾವಿರ ಎಕರೆ ಒತ್ತುವರಿಯಾಗಿದೆ. ಈ ಒತ್ತುವರಿಯನ್ನು ಮಾಡಿದವರು ಮುಸ್ಲಿಂ ಸಮುದಾಯದವರೇ ಎಂದು ಹೇಳಿದರು.
ವಕ್ಛ್ ಆಸ್ತಿ ಒತ್ತುವರಿ ತೆರವಿಗಾಗಿ ವಕ್ಛ್ ಅದಾಲತ್‌ನ್ನು ನಡೆಸಿದ್ದೇವೆ. ವಕ್ಛ್ ಅದಾಲತ್‌ನ ಬಗ್ಗೆ ಹಿಂದೆ ಪ್ರತಿಪಕ್ಷಗಳು ಟೀಕೆ ಮಾಡಿದ್ದವು. ಆದರೆ ಈ ಅದಾಲತ್ ನಡೆಸಿರುವುದು ವಕ್ಛ್ ಆಸ್ತಿ ಉಳಿಸಲು ಎಂದು ಅವರು ಹೇಳಿದರು.
ದೇವಸ್ಥಾನ, ಶಾಲೆಗಳಿಗೆ ಬಳಕೆಯಾಗಿರುವ ವಕ್ಛ್ ಆಸ್ತಿಗಳನ್ನು ನಾವು ಹಾಗೆಯೇ ಬಿಟ್ಟಿದ್ದೇವೆ. ಉಳಿದಂತೆ ವಕ್ಛ್ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಕ್ಛ್ ಆಸ್ತಿ ಒತ್ತುವರಿ ತೆರವು ಮಾಡಿ. ನಮ್ಮದೇನು ಅಭ್ಯಂತರವಿಲ್ಲ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಹೋಟೆಲ್ ಇರುವ ಜಾಗ ಸಹ ವಕ್ಛ್ ಆಸ್ತಿ. ಆ ಬಗ್ಗೆಯೂ ಸಚಿವರೇ ಮಾತನಾಡಿ. ವಕ್ಛ್ ಆಸ್ತಿ ಕಬಳಿಕೆಯ ಬಗ್ಗೆ ತನಿಖೆ ನಡೆಸಿ. ನಮ್ಮದು ನಮ್ಮದೇ, ನಿಮ್ಮದು ನಮ್ಮದೇ ಎಂದಾಗಬಾರದು ಎಂದು ಹೇಳಿದರು.
ಆಗ ಮಾತು ಮುಂದುವರೆಸಿದ ಸಚಿವ ಜಮೀರ್ ಅಹಮದ್ ಖಾನ್, ವಕ್ಛ್ ಆಸ್ತಿಗಳನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಅವುಗಳನ್ನು ವಾಪಸ್ ಪಡೆಯುತ್ತೇವೆ. ಅಫ್ಜಲ್ ಪುರ ತಾಲ್ಲೂಕಿನಲ್ಲೂ 30 ವಕ್ಛ್ ಆಸ್ತಿಗಳನ್ನು ಒತ್ತುವರಿ ಮಾಡಲಾಗಿತ್ತು. ಅವುಗಳಲ್ಲಿ 23 ಪ್ರಕರಣಗಳನ್ನು ಇತ್ಯರ್ಥಪಡಿಸಿ ಸ್ವಾಧಿನಕ್ಕೆ ಪಡೆದಿದ್ದೇವೆ ಎಂದು ತಿಳಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…