Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ್‌ ಅವರು, ಕಾನೂನು ಪಾಲನೆ ವಿಚಾರದಲ್ಲಿ ಪರಿಣಾಮಕಾರಿ ಕೆಲಸ ಆಗುತ್ತಿದೆ. ತರಬೇತಿನಿರತ ಪೊಲೀಸರನ್ನು ಕೂಡ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇವೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. 4 ವರ್ಷದಿಂದ ನೇಮಕಾತಿ ಆಗದಿರುವುದು ಸಮಸ್ಯೆ ಹೆಚ್ಚಾಗಲು ಕಾರಣ. ನಮ್ಮ ಸರ್ಕಾರ ಈಗ ನೇಮಕಾತಿ ಮಾಡಿಕೊಳ್ಳುತ್ತಿದೆ. ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

Tags:
error: Content is protected !!