ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ್ ಅವರು, ಕಾನೂನು ಪಾಲನೆ ವಿಚಾರದಲ್ಲಿ ಪರಿಣಾಮಕಾರಿ ಕೆಲಸ ಆಗುತ್ತಿದೆ. ತರಬೇತಿನಿರತ ಪೊಲೀಸರನ್ನು ಕೂಡ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇವೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. 4 ವರ್ಷದಿಂದ ನೇಮಕಾತಿ ಆಗದಿರುವುದು ಸಮಸ್ಯೆ ಹೆಚ್ಚಾಗಲು ಕಾರಣ. ನಮ್ಮ ಸರ್ಕಾರ ಈಗ ನೇಮಕಾತಿ ಮಾಡಿಕೊಳ್ಳುತ್ತಿದೆ. ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…