ರಾಜ್ಯ

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಈ ಕುರಿತು ಬಜೆಟ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂತ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

5 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

5 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

5 hours ago