Mysore
33
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಈ ಕುರಿತು ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಕನ್ನಡ ಪರ ಹೋರಾಟ ಮಾಡುವವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಮಾಡುತ್ತಿದೆ. ವಾಟಾಳ್‌ ನಾಗರಾಜ್‌ ಅವರಿಗೆ ಖಂಡಿತವಾಗಿ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕು. ಈ ವರ್ಷ ಆಯ್ಕೆ ಸಮಿತಿಯ ಮುಂದೆ ಅವರ ಹೆಸರನ್ನು ಪ್ರಸ್ತಾವನೆಗೆ ಕಳುಹಿಸುತ್ತೇವೆ. ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಕಡೆಯುವ ಕೆಲಸ ಮಾಡುತ್ತೇವೆ. ಕನ್ನಡ ಪರ ಹೋರಾಟ ಮಾಡುವ ಸಂಘ-ಸಂಸ್ಥೆಗಳಿಗೆ ನಿವೇಶನ ಕೊಡುವ ಬಗ್ಗೆ ಸಿಎಂ ಗಮನಕ್ಕೆ ತಂದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

 

Tags:
error: Content is protected !!