ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವಿಧ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ನಾಳೆ ಮಾಜಿ ಶಾಸಕರು, ಮಾಜಿ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭೋಜನಕೂಟ ಏರ್ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ಬೆಂಗಳೂರು: ಆರು ಮಂದಿ ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಂತಸ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್…
ಮೈಸೂರು: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್ ಒಳಗೆ ಅಳವಡಿಸಲಾದ…
ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ನಿಧನರಾಗಿದ್ದಾರೆ. ಅವರಿಗೆ 80…
ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಏಪ್ರಿಲ್‌ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ…