ರಾಜ್ಯ

ದೇಸಿ ತಿನಿಸುಗಳ ಬೇಡಿಕೆ ಹೆಚ್ಚಸಲು ಕ್ರಮ : ಎನ್ ಚಲುವರಾಯಸ್ವಾಮಿ

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.

ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ . ಅದರ ಉತ್ತೇಜನಕ್ಕೆ ಜ‌. 23-25 ರ ವರಗೆ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ಅಂತರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಬೆಂಗಳೂರು ಸಂಪೂರ್ಣ ಕರ್ನಾಟಕದ ಪರಿಕಲ್ಪನೆಯ ನಗರ. ಇಲ್ಲಿ ಎಲ್ಲಾ ತರದ ತಿನಿಸು ಲಭ್ಯ. ಅದರೆ ನಮ್ಮ ಕರ್ನಾಟಕದ ಆಹಾರಗಳ ಸತ್ವ ಮತ್ತು ಸವಿಯನ್ನು ಉಣ ಬಡಿಸುತ್ತಾ 25 ವರ್ಷಕ್ಕೆ ಪಾದಾರ್ಪಣೆ ಮಾಡಿದ ನಳಪಾಕ ಹೋಟೆಲ್ ನ ಯಶಸ್ಸು ಅಭಿನಂದನೀಯ ಎಂದು ಪ್ರಶಂಸಿದರು.

ಸಂಕ್ರಾಂತಿ ರೈತರ ಸಂಭ್ರಮ ಹಂಚಿಕೆಯ ಸುಗ್ಗಿ ಹಬ್ಬ. ಈ ಬಾರಿ ಜ.14 ರಂದು ನಾಗಮಂಗಲ ಕ್ಷೇತ್ರದ ದೇವಲಾಪುರ ಗ್ರಾಮದಲ್ಲಿ ವಿಶೇಷ ಸಂಕ್ರಾಂತಿ ಕಾರ್ಯಕ್ರಮ‌ ಆಯೋಜಿಸಿದ್ದು ರೈತಾಪಿ ಕುಟುಂಬದೊಂದಿಗೆ ಒಂದು ದಿನ ಕಾಲಕಳೆಯಲು ಬಯಸಿದ್ದೇನೆ ಎಂದು ಅವರು ತಿಳಿಸಿದರು.

ಶಾಸಕ ಗೋಪಾಲಯ್ಯ  ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

4 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

4 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

4 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

4 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

4 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

4 hours ago