ಶಿವಮೊಗ್ಗ: ರಾಜ್ಯದಲ್ಲಿ ಶೀಘ್ರದಲ್ಲೇ 18,500 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13,000 ಶಿಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೇ ಶೀಘ್ರದಲ್ಲೇ 18,500 ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಸರ್ವರಲ್ಲೂ ಸಮಾನತೆ ಕಾಣುವ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಜಾತಿಗಣತಿಯನ್ನು ಅಕ್ಟೋಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಗೆ ಅಡಚಣೆಯಾಗದಂತೆ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಂಖ್ಯೆಯನ್ನು 500 ರಿಂದ 800ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯ ಶಾಲೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.





