ಬೆಂಗಳೂರು: ಕರ್ನಾಟಕ ಬಂದ್ ಪ್ರತಿಭಟನೆಯ ವೇಳೆ ಸಂಘಟನೆಗಳು ಕಾನೂನು ಮೀರಿ ವರ್ತಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ರಾಜ್ಯ ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಕಡೆಯಿಂದಲೂ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ ಎಂದರು.
ಬಂದ್‌ನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೂರ್ನಾಲ್ಕು ದಿನದಿಂದ ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಅದಕ್ಕೂ ಮೀರಿ ಪ್ರತಿಭಟನಕಾರರು ಕಾನೂನು ಮೀರಿ ವರ್ತಸಿದರೆ ಬಂಧಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.