ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಉತ್ತರ ನೀಡಿದರು.
ಇದನ್ನು ಓದಿ: 2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ
2024-25ರಲ್ಲಿ ನಬಾರ್ಡ್ ನಿಂದ 5600 ಕೋಟಿ ಕಮ್ಮಿ ಬಡ್ಡಿದರದಲ್ಲಿ ಬರಬೇಕಾಗಿತ್ತು. ಅದರಲ್ಲಿ 3415 ಕೋಟಿ ರೂ. ಬಂದಿದ್ದು, 2185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್ಸಿ, ಎಸ್ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ.8ರಷ್ಟು ಮಾತ್ರ ಎಸ್‌ಸಿ, ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನು ಪ್ರಕಾರ ನಿವಾರಣೆ ಮಾಡಲಾಗುವುದು ಎಂದರು.
ಕುಣಿಗಲ್ ತಾಲ್ಲೂಕಿನಲ್ಲಿ 4 ಲಕ್ಷ ಪಹಣಿ ಇದ್ದು, 1 ಲಕ್ಷ ರೈತರಿದ್ದಾರೆ. ಆದರೆ ಡಿಸಿಸಿ ಬ್ಯಾಂಕ್ ಗಳ ಮೂಲಕ ಕೇವಲ 20 ರೈತರಿಗೆ ಮಾತ್ರ ಅಲ್ಪಾವಧಿ ಸಾಲ ಕೊಟ್ಟಿರುತ್ತಾರೆ. ರೈತರ ಹಣವನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿರುವ ಇಂತಹ ಸಂಘಗಳಿಂದ ರೈತರ ರಕ್ಷಣೆಗೆ ಸರ್ಕಾರ ಬರಬೇಕಿದೆ ಎಂದು ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ಅವರು ತಮ್ಮ ಪ್ರಶ್ನೆಯ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…