ಬೆಂಗಳೂರು : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
“ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ” ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ನಗರದ ಗಾಂಧಿಭವನದ ಬಳಿ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು:
“ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ ಹಳ್ಳಿಯಲ್ಲಿರುವವರು ಬಡಿದಾಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಎಂದಿಗೂ, ಯಾವತ್ತಿಗೂ ಹೇಳುವುದಿಲ್ಲ” ಎಂದರು.
ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಚೀಫ್ ವಿಪ್ ಅಶೋಕ್ ಪಟ್ಟಣ ಹೇಳಿದ್ದಾರೆ ಎಂದು ಕೇಳಿದಾಗ, “ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ” ಎಂದು ಹೇಳಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…