ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ನೀಡಿರುವುದಕ್ಕೆ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯ ಮೂಲಕ ನಟ ಚೇತನ್ ಅಹಿಂಸಾ ಅವರು, ಸೋಮಾರಿ ಸಿಎಂ ಸಿದ್ದು ಅವರು ಟಾಪರ್ ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿ ನೀಡಿರುವುದು ಎಷ್ಟು ಸರಿ ಎಂದು ಟೀಕಿಸಿದ್ದಾರೆ.
ಎಷ್ಟು ವಿಪರ್ಯಾಸ. ಅಂಬೇಡ್ಕರ್ ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್ ಪಕ್ಷ (ರಾಜಕೀಯ ಹಿಂದೂ ಧರ್ಮ); ಇಂದಿನ ಕಾಂಗ್ರೆಸ್ ಪಕ್ಷ (ಅದೇ ಮನುವಾದ) ಅಂಬೇಡ್ಕರ್ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿಸುತ್ತಾರೆ. ಗಾಂಧಿಯವರ 36 ಬ್ರಾಹ್ಮಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು; ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…