ತುಮಕೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು, ಮದುವೆಯ ಸಿದ್ಧತೆಯಲ್ಲಿದ್ದು, ಇಂದು ತುಮಕೂರಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಶ್ರೀಗಳಿಗೆ ಆಹ್ವಾನ ನೀಡಿದ್ದಾರೆ.
ಮಠಕ್ಕೆ ಭೇಟಿ ನೀಡಿದ ಬಳಿಕ ಡಾಲಿ ಧನಂಜಯ್ ಅವರು ಮೊದಲಿಗೆ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಯಲ್ಲಿ ಲಗ್ನ ಪತ್ರಿಕೆಯನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದರು. ತದನಂತರದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದು ಮದುವೆಗೆ ಬರುಬೇಕು ಎಂದು ಆಹ್ವಾನ ನೀಡಿದರು. ಈ ವೇಳೆ ಡಾಲಿ ಧನಂಜಯ್ ಜೊತೆ ಸ್ನೇಹಿತರು ಸಹ ಇದ್ದು ಸಾಥ್ ನೀಡಿದರು.
ಮುಂದಿನ ತಿಂಗಳ ಫೆಬ್ರವರಿ.16ಕ್ಕೆ ನಟ ಡಾಲಿ ಧನಂಜಯ್ ಅವರು ವೈಧ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿಂದೆ ನವೆಂಬರ್.17ರಂದು ಧನಂಜಯ್ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಚಿತ್ರರಂಗದ ಪ್ರಮುಖರಿಗೆ ಮದುವೆ ಆಹ್ವಾನ ಪತ್ರಿಕೆ ಕೊಡುತ್ತಿರುವ ಡಾಲಿ ಧನಂಜಯ್ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಸುತ್ತೂರು ಶ್ರೀ ಸೇರಿದಂತೆ ಹಲವು ಗಣ್ಯರಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್ ಅವರ ಮದುವೆ ಅದ್ಧೂರಿಯಾಗಿ ಜರುಗಲಿದ್ದು, ಗಣ್ಯಾತಿಗಣ್ಯರು ಸಾಕ್ಷಿಯಾಗಲಿದ್ದಾರೆ.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…