ರಾಜ್ಯ

ಸಿದ್ಧಗಂಗಾ ಮಠಕ್ಕೆ ಡಾಲಿ ಧನಂಜಯ್‌ ಭೇಟಿ: ಶ್ರೀಗಳನ್ನು ಮದುವೆಗೆ ಆಹ್ವಾನಿಸಿದ ನಟ

ತುಮಕೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು, ಮದುವೆಯ ಸಿದ್ಧತೆಯಲ್ಲಿದ್ದು, ಇಂದು ತುಮಕೂರಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಶ್ರೀಗಳಿಗೆ ಆಹ್ವಾನ ನೀಡಿದ್ದಾರೆ.

ಮಠಕ್ಕೆ ಭೇಟಿ ನೀಡಿದ ಬಳಿಕ ಡಾಲಿ ಧನಂಜಯ್‌ ಅವರು ಮೊದಲಿಗೆ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಯಲ್ಲಿ ಲಗ್ನ ಪತ್ರಿಕೆಯನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದರು. ತದನಂತರದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದು ಮದುವೆಗೆ ಬರುಬೇಕು ಎಂದು ಆಹ್ವಾನ ನೀಡಿದರು. ಈ ವೇಳೆ ಡಾಲಿ ಧನಂಜಯ್‌ ಜೊತೆ ಸ್ನೇಹಿತರು ಸಹ ಇದ್ದು ಸಾಥ್‌ ನೀಡಿದರು.

ಮುಂದಿನ ತಿಂಗಳ ಫೆಬ್ರವರಿ.16ಕ್ಕೆ ನಟ ಡಾಲಿ ಧನಂಜಯ್‌ ಅವರು ವೈಧ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿಂದೆ ನವೆಂಬರ್.17ರಂದು ಧನಂಜಯ್‌ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಚಿತ್ರರಂಗದ ಪ್ರಮುಖರಿಗೆ ಮದುವೆ ಆಹ್ವಾನ ಪತ್ರಿಕೆ ಕೊಡುತ್ತಿರುವ ಡಾಲಿ ಧನಂಜಯ್‌ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ವಿಜಯೇಂದ್ರ, ಸುತ್ತೂರು ಶ್ರೀ ಸೇರಿದಂತೆ ಹಲವು ಗಣ್ಯರಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್‌ ಅವರ ಮದುವೆ ಅದ್ಧೂರಿಯಾಗಿ ಜರುಗಲಿದ್ದು, ಗಣ್ಯಾತಿಗಣ್ಯರು ಸಾಕ್ಷಿಯಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

48 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

1 hour ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

3 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

5 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

8 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago