Mysore
35
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ವಿಚಾರಣೆಗೆ ನಟ ದರ್ಶನ್‌ ಗೈರು: ಎಚ್ಚರಿಕೆ ನೀಡಿದ ನ್ಯಾಯಾಲಯ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ನಟ ದರ್ಶನ್‌ ಹಾಜರಾಗಬೇಕು ಎಂದು 57ನೇ ಸಿಸಿಹೆಚ್‌ ನ್ಯಾಯಾಲಯ ಖಡಕ್‌ ಎಚ್ಚರಿಕೆ ನೀಡಿದೆ.

ಇಂದು 57ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ನಟ ದರ್ಶನ್‌ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ಆದರೆ, ದರ್ಶನ್‌ ಮಾತ್ರ ಅನಾರೋಗ್ಯ ವಿಚಾರ ಇಟ್ಟುಕೊಂಡು ವಿನಾಯಿತಿ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದೇ ವೇಳೆ ದರ್ಶನ್‌ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಧೀಶರು, ಮುಂದಿನ ಕೇಸ್‌ ವಿಚಾರಣೆ ವೇಳೆ ದರ್ಶನ್‌ ಹಾಜರಿರಬೇಕು. ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರು ಹಾಜರಾಗಬಾರದು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಿಕೆ ಮಾಡಲಾಗಿದೆ.

 

Tags:
error: Content is protected !!