ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕನ್ನಡ ಒಕ್ಕೂಟದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.
ತನಿಖಾಧಿಕಾರಿಗಳೇ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿ ಒಬ್ಬ ನಟನನ್ನು ಜೈಲಿನಲ್ಲಿ ಕಳೆಯುವಂತೆ ಮಾಡಿದ್ದಾರೆ. ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಗಳು ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ. ಯಾವುದೋ ಒತ್ತಡಕ್ಕೆ ಮಣಿದು ಇಂತಹ ಕೃತ್ಯವೆಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.




