ರಾಜ್ಯ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ ಮುಕ್ತಾಯ ಆಗಿಲ್ಲ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಏಪ್ರಿಲ್ 2ನೇ ವಾರದಲ್ಲಿ ಮನವಿ ಮಾಡಿದ್ದಾರೆ.

ಟ್ರಯಲ್ ಪ್ರಾರಂಭವಾಗಿ 8 ತಿಂಗಳಿಗೆ 15 ಸಾಕ್ಷಿಗಳಷ್ಟೇ ವಿಚಾರಣೆಯಾಗಿದೆ. ಪ್ರಕರಣದಲ್ಲಿ 273 ಸಾಕ್ಷ್ಯಗಳು ಇದ್ದಾವೆ. ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಹೊರತು ಪಡಿಸಿದರೆ, ಮಹಜರು ಸಾಕ್ಷಿಗಳ ವಿಚಾರಣೆ ಮಾತ್ರ ನಡೆಯುತ್ತಿದೆ. ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago