ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್‌ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಹಾಗೂ ಗ್ಯಾಂಗ್‌ನ ಪೊಲೀಸ್ ಕಸ್ಟಡಿ ಇಂದು(ಜೂ.20) ಅಂತ್ಯವಾದ ಹಿನ್ನಲೆಯಲ್ಲಿ ಎಲ್ಲಾ ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್‌ನಲ್ಲಿ ಹಾಜರಾದ ಆರೋಪಿಗಳನ್ನು ನ್ಯಾಯಾಧೀಶ ವಿಶ್ವನಾಥ್ ಸಿ.ಗೌಡ ಅವರು ವಿಚಾರಣೆ ನಡೆಸಿದರು.
ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಆರೋಪಿಗಳ ವಿಚಾರಣೆ ಅಗತ್ಯವಿರುವುದರಿಂದ ಎರಡು ದಿನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುವುದರಿಂದ ಪವಿತ್ರ ಪರಪ್ಪನ ಅಗ್ರಹಾರ ಸೇರಲಿದ್ದಾರೆ.
ಆರೋಪಿಗಳಾದ ವಿನಯ್,ಪ್ರದೋಷ್‌ಮತ್ತು ಧನರಾಜ್ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್‌ನೊಂದಿಗೆ ವಿಚಾರಣೆ ಎದುರಿಸಲಿದ್ದಾರೆ. ಉಳಿದ ಆರೋಪಿಗಳು ಪವಿತ್ರಗೌಡ ಜೊತೆ ಜೈಲು ಪಾಲಾಗಿದ್ದಾರೆ.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…