ರಾಜ್ಯ

ಜೈಲಿನಲ್ಲಿ ನಟ ದರ್ಶನ್‌ಗೆ 40 ನಿಮಿಷ ವಾಕ್‌ ಮಾಡಲು ಅವಕಾಶ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ 40 ನಿಮಿಷ ವಾಕ್‌ ಮಾಡಲು ಅವಕಾಶ ನೀಡಲಾಗಿದೆ.

ಬೆಳಿಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್‌ ಮಾಡಲು ಅವಕಾಶ ನೀಡಲಾಗಿದ್ದು, ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್‌ ಮಾಡಲು ಅನುಮತಿ ಸಿಕ್ಕಿದೆ.

ಈ ಸಂದರ್ಭದಲ್ಲಿ ಬೇರೆ ವಿಚಾರಣಾಧೀನ ಕೈದಿಗಳಿಗೆ ವಾಕ್‌ ಮಾಡಲು ಅವಕಾಶ ಇರುವುದಿಲ್ಲ. ಸುಪ್ರೀಂಕೋರ್ಟ್‌ ಎಚ್ಚರಿಕೆ ಬಳಿಕ ನಟ ದರ್ಶನ್‌ ಸುತ್ತಾಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳ ಹಿಂದೆ ನಟ ದರ್ಶನ್‌ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ನಟ ದರ್ಶನ್‌ ನ್ಯಾಯಾಧೀಶರ ಮುಂದೆ ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಮನವಿ ಮಾಡಿದ್ದರು.

ಬಳಿಕ ಮಧ್ಯಾಹ್ನದ ವೇಳೆಗೆ ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯವು ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ಆದೇಶ ಹೊರಡಿಸಿ, ಪರಪ್ಪನ ಅಗ್ರಹಾರ ಜೈಲಿನೊಳಗೆ ನಟ ದರ್ಶನ್‌ ಓಡಾಡಬಹುದು ಎಂದು ಹೇಳಿತ್ತು.

ಜೊತೆಗೆ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡಲು ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಈಗ ದರ್ಶನ್‌ ಕೊಂಚ ನಿರಾಳರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago