ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ರಿಪೋರ್ಟ್‌ಗಾಗಿ ಹೈದಾರಾಬಾದ್‌ಗೆ ಮೊಬೈಲ್ ಕಳುಹಿಸಿದ್ದೆವು. ಕೊಲೆಯಾದ ಸ್ಥಳದಲ್ಲಿ ಆರೋಪಿ ದರ್ಶನ್ ಇದ್ದ ಫೋಟೋ ರಿಟ್ರೀವ್ ವೇಳೆ ಸಿಕ್ಕಿದೆ ಎಂದು ಹೇಳಿದರು.
ಯಾರೋ ಜೊತೆಯಲ್ಲಿದ್ದವನು ವಿಡಿಯೋ ಮಾಡಿಕೊಂಡಿದ್ದ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದು ಮಾಡಿಸಬೇಕು. ಮುಂದೆ ಏನು ಕ್ರಮ ಆಗಬೇಕು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ಇನ್ನು ದರ್ಶನ್ ಆಪರೇಷನ್ ಮಾಡಿಸದ ವಿಚಾರದ ಬಗ್ಗೆ ಮಾತನಾಡಿದ ಅವರು, ಆಪರೇಷನ್ ಅಗತ್ಯ ಇಲ್ಲ ಎಂದು ಇದರಿಂದಲೇ ಗೊತ್ತಾಗುತ್ತಿದೆ. ಆಪರೇಷನ್ ಮಾಡದಿದ್ದರೆ ಬೆನ್ನು ಮೂಳೆ ಮುರಿದು ಹೋಗುತ್ತದೆ ಎನ್ನುತ್ತಿದ್ದರು. ಇಷ್ಟು ದಿನವಾದರೂ ದರ್ಶನ್‌ಗೆ ವೈದ್ಯರು ಆಪರೇಷನ್ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ವ್ಯವಸ್ಥೆಯಲ್ಲಿ ತೀರ್ಮಾನ ಕೊಡಬೇಕು ಎಂದು ಹೇಳಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…