ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದ್ದು, ದರ್ಶನ್ ಪರ ವಕೀಲರು ಬಲವಾದ ವಾದ ಮಂಡಿಸಿ ಪೊಲೀಸರು ವೈಫಲ್ಯಗಳನ್ನು ತೋರಿಸಿದ್ದಾರೆ. ಹೀಗಾಗಿ, ಎಸ್‌ಪಿಪಿ ಪ್ರಸನ್ನಕುಮಾರ್ ಪ್ರತಿವಾದಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ(ಅ.9) 57ನೇ ಸಿಸಿಎಚ್ ನ್ಯಾಯಾಲಯ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಮುಗಿಸಿದ ನಂತರ ಆರೋಪಿ ಎ2 ದರ್ಶನ್ ಹಾಗೂ ಎ1 ಪವಿತ್ರಾ ಅವರ ವಕೀಲರು ಪ್ರಕರಣದ ತನಿಖೆಗೆ ಬಗ್ಗೆ ಕೇಳಿದ ಕೆಲವು ಪ್ರಶ್ನೆಗಳಿಗೆ ಎಸ್‌ಪಿಪಿ ಅವರು ಉತ್ತರ ನೀಡಲು ಪ್ರಾರಂಭಿಸಿದರು.
ಎಸ್‌ಪಿಪಿ ಅವರ ಸುದೀರ್ಘ ವಾದ ಮಂಡನೆಯ ಸಂದರ್ಭದಲ್ಲಿ ನ್ಯಾಯಾಲಯದ ಸಮಯ ಮೀರಿದ ಕಾರಣ ಹಾಗೂ ಆರೋಪಿಗಳ ಪರ ವಕೀಲರು ಕೇಳಿರುವ ಇನ್ನುಳಿದ ಪ್ರಶ್ನೆಗಳಿಗೆ ಉತ್ತರಿಸಲು ಇನ್ನಷ್ಟು ಸಮಯ ಬೇಕಾಗಿರುವುದರಿಂದ ಎಸ್‌ಪಿಪಿ ಪ್ರಸನ್ನಕುಮಾರ್ ಅವರ ಮನವಿಯ ಮೇರೆಗೆ ನಾಳೆ(ಅ.9) ಮಧ್ಯಾಹ್ನ 12.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…