Mysore
20
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ನಟ ದರ್ಶನ್‌ ಪ್ರಕರಣ: ದಚ್ಚು ಪುತ್ರ ವಿನೀಶ್‌ನ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್‌ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ತಾನೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪತಿ ದರ್ಶನ್‌ನನ್ನು ಅನ್‌ಫಾಲೋ ಮಾಡಿ, ಡಿಪಿ ಕೂಡ ಬದಲಾಯಿಸಿದ್ದರು.

ವಿಜಯಲಕ್ಷ್ಮೀ ಕೂಡ ಪ್ರಕರಣ ಸಂಬಂಧ ಈವರೆಗೂ ಯಾವುದೇ ಕಾಮೆಂಟ್‌ ಮಾಡಿಲ್ಲ. ಆದರೆ ಇತ್ತ, ದರ್ಶನ್‌ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ ವಿನೀಶ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಸದ್ಯ ಈ ಪೋಸ್ಟ್‌ ಎಲ್ಲರ ಗಮನ ಸೆಳೆದಿದೆ.

ತಂದೆ ದರ್ಶನ್‌ ಅರೆಸ್ಟ್‌ಗೆ ಪುತ್ರ ವಿನೀಶ್‌ ದರ್ಶನ್‌ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ , ಸೋಶಿಯಲ್‌ ಮೀಡಿಯಾದ ಒತ್ತಡ ಹಾಗೂ ಕೆಟ್ಟ ಕಾಮೆಂಟ್‌ಗಳ ಬಗ್ಗೆ ಬರೆದುಕೊಂಡಿದ್ದಾರೆ.

ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್‌ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ. ಇಂತಹ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನನಗೆ ಶಾಪ ಹಾಕಿದ್ರೆ ಬದಲಾವಣೆ ಆಗೋದಿಲ್ಲ.  ನೀವು ಹಾಕಿರುವ ಶಾಪವನ್ನು ಬದಲಿಸಲು ಸಾಧ್ಯವಿಲ್ಲ, ಎಲ್ಲರಿಗೂ ಥ್ಯಾಂಕ್ಸ್‌ ಎಂದು ವಿನೀಶ್‌ ಬರೆದುಕೊಂಡಿದ್ದಾರೆ.

Tags:
error: Content is protected !!