ಬೆಂಗಳೂರು: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ತಾನೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪತಿ ದರ್ಶನ್‌ನನ್ನು ಅನ್‌ಫಾಲೋ ಮಾಡಿ, ಡಿಪಿ ಕೂಡ ಬದಲಾಯಿಸಿದ್ದರು.
ವಿಜಯಲಕ್ಷ್ಮೀ ಕೂಡ ಪ್ರಕರಣ ಸಂಬಂಧ ಈವರೆಗೂ ಯಾವುದೇ ಕಾಮೆಂಟ್ ಮಾಡಿಲ್ಲ. ಆದರೆ ಇತ್ತ, ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ ವಿನೀಶ್ ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಪೋಸ್ಟ್ ಎಲ್ಲರ ಗಮನ ಸೆಳೆದಿದೆ.
ತಂದೆ ದರ್ಶನ್ ಅರೆಸ್ಟ್‌ಗೆ ಪುತ್ರ ವಿನೀಶ್ ದರ್ಶನ್ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ , ಸೋಶಿಯಲ್ ಮೀಡಿಯಾದ ಒತ್ತಡ ಹಾಗೂ ಕೆಟ್ಟ ಕಾಮೆಂಟ್‌ಗಳ ಬಗ್ಗೆ ಬರೆದುಕೊಂಡಿದ್ದಾರೆ.
ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ. ಇಂತಹ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನನಗೆ ಶಾಪ ಹಾಕಿದ್ರೆ ಬದಲಾವಣೆ ಆಗೋದಿಲ್ಲ. ನೀವು ಹಾಕಿರುವ ಶಾಪವನ್ನು ಬದಲಿಸಲು ಸಾಧ್ಯವಿಲ್ಲ, ಎಲ್ಲರಿಗೂ ಥ್ಯಾಂಕ್ಸ್ ಎಂದು ವಿನೀಶ್ ಬರೆದುಕೊಂಡಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…