Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಟ ದರ್ಶನ್‌ಗೆ ಮತ್ತೆ ನಿರಾಸೆ: ಕೆಲ ಸೌಲಭ್ಯ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಜೈಲಿನಲ್ಲಿ ದಿಂಬು, ಹಾಸಿಗೆ ಸೇರಿದಂತೆ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್‌ ಸೆಪ್ಟೆಂಬರ್.‌25ಕ್ಕೆ ಮುಂದೂಡಿಕೆ ಮಾಡಿದೆ.

ಜೈಲಿನಲ್ಲಿ ತನಗೆ ಹಾಸಿಗೆ, ದಿಂಬು ಒದಗಿಸುವಂತೆ ಈ ಹಿಂದೆ ನಟ ದರ್ಶನ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ ದರ್ಶನ್‌ಗೆ ಹಾಸಿಗೆ, ತಲೆದಿಂಬು ನೀಡುವಂತೆ ಆದೇಶ ನೀಡಿತ್ತು.

ಇದನ್ನೂ ಓದಿ: Mysuru dasara | ಸೆ.22ರಂದು ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟ ಉದ್ಘಾಟನೆ

ಆದರೆ ಕೋರ್ಟ್‌ ಆದೇಶ ನೀಡಿದರೂ ಜೈಲಾಧಿಕಾರಿಗಳು ಮಾತ್ರ ಈವರೆಗೂ ದರ್ಶನ್‌ಗೆ ಯಾವುದೇ ಹಾಸಿಗೆ, ತಲೆದಿಂಬು ಮೊದಲಾದ ವ್ಯವಸ್ಥೆ ಮಾಡಿರಲಿಲ್ಲ.

ಇದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವ ನಟ ದರ್ಶನ್‌ ಮತ್ತೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಜೈಲಾಧಿಕಾರಿಗಳು ಕೋರ್ಟ್‌ ಆದೇಶ ಪಾಲನೆ ಮಾಡಿಲ್ಲ ಎಂದು ದೂರು ನೀಡಿದ್ದರು.

ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌, ವಾದ-ಪ್ರತಿವಾದ ಆಲಿಸಿದ್ದು, ಅರ್ಜಿ ಕುರಿತ ಆದೇಶವನ್ನು ಸೆಪ್ಟೆಂಬರ್.‌19ಕ್ಕೆ ನಿಗದಿ ಮಾಡಿತ್ತು. ಇಂದು ವಿಚಾರಣೆ ಕೈಗೆತ್ತಿಕೊಂಡಿದ್ದ

Tags:
error: Content is protected !!