Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಿಂದ ನಟ ದರ್ಶನ್‌ ಡಿಸ್ಚಾರ್ಜ್‌

ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌ ಅವರಿಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್‌ಗೆ ಕಳೆದ ಶುಕ್ರವಾರ ರೆಗ್ಯುಲರ್‌ ಜಾಮೀನು ಮಂಜೂರಾಗಿದೆ.

ಈ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದ ಕಳೆದ ಒಂದೂವರೆ ತಿಂಗಳಿನಿಂದ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಎ2 ಆರೋಪಿಯಾಗಿರುವ ನಟ ದರ್ಶನ್‌ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ಪರಿಣಾಮ ಅವರಿಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಈ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನಟ ದರ್ಶನ್ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಸ್ಪತ್ರೆಯಲ್ಲೇ ರೆಗ್ಯುಲರ್‌ ಬೇಲ್‌ಗೆ ಅರ್ಜಿ ಸಲ್ಲಿಸಿದ್ದ ನಟ ದರ್ಶನ್‌ಗೆ ಕಳೆದ ಶುಕ್ರವಾರ ಹೈಕೋರ್ಟ್‌ ರೆಗ್ಯುಲರ್‌ ಜಾಮೀನು ಮಂಜೂರು ಮಾಡಿತ್ತು.

ಈ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕ ಖುಷಿಯಲ್ಲೇ ಆರೋಪಿ ದರ್ಶನ್‌ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್‌ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯೇ ಬಿಜಿಎಸ್‌ ಆಸ್ಪತ್ರೆಗೆ ಆಗಮಿಸಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್‌ ಹಾಗೂ ನಟ ಧನ್ವೀರ್‌ ಅವರು ನಟ ದರ್ಶನ್‌ರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿಸಿಕೊಂಡು ಕಾರಿನಲ್ಲಿ ಕರೆದೊಯ್ದಿದ್ದಾರೆ.

Tags: