ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಅವರಿಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್‌ಗೆ ಕಳೆದ ಶುಕ್ರವಾರ ರೆಗ್ಯುಲರ್ ಜಾಮೀನು ಮಂಜೂರಾಗಿದೆ.
ಈ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದ ಕಳೆದ ಒಂದೂವರೆ ತಿಂಗಳಿನಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಎ2 ಆರೋಪಿಯಾಗಿರುವ ನಟ ದರ್ಶನ್ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ಪರಿಣಾಮ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆಸ್ಪತ್ರೆಯಲ್ಲೇ ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ್ದ ನಟ ದರ್ಶನ್‌ಗೆ ಕಳೆದ ಶುಕ್ರವಾರ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕ ಖುಷಿಯಲ್ಲೇ ಆರೋಪಿ ದರ್ಶನ್ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಿಗ್ಗೆಯೇ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್ ಹಾಗೂ ನಟ ಧನ್ವೀರ್ ಅವರು ನಟ ದರ್ಶನ್‌ರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಕಾರಿನಲ್ಲಿ ಕರೆದೊಯ್ದಿದ್ದಾರೆ.
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…