ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ಈಗ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ಮಾಡಿಕೊಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಟ ದರ್ಶನ್ ಅವರು, ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ದುಬೈ ಹಾಗೂ ಯುರೋಪ್‌ಗೆ ತೆರಳಲು ಅವಕಾಶ ಕೊಡಿ ಎಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗದಂತೆ ಷರತ್ತು ವಿಧಿಸಿತ್ತು. ಆ ಬಳಿಕ ಹೊರರಾಜ್ಯಗಳಿಗೆ ಹೋಗಲು ಅನುಮತಿ ನೀಡಿತ್ತು. ಇದೀಗ ಡೆವಿಲ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹೋಗಲು ಅನುಮತಿ ನೀಡುವಂತೆ ಮನವಿ ಮಾಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.





