ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್‌ಸಿಆರ್ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ.
ನಟ ದರ್ಶನ್ 2022ರಲ್ಲಿ ಯುವ ನಿರ್ಮಾಪಕ ಭರತ್ ಅವರಿಗೆ ಕರೆ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರ ಬಗ್ಗೆ ಭರತ್ ಅವರು ಮಾಧ್ಯಮಗಳ ಮುಂದೆ ಕರೆ ಮಾಹಿತಿ ಹಾಗೂ ಕಾಲ್ ರೆಕಾರ್ಡ್‌ಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವನ್, ನಟ ದರ್ಶನ್ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜು ಮೇಲೆ ಹೊಸದಾಗಿ ಎನ್‌ಸಿಆರ್ ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.
ನಟ ದರ್ಶನ್ ಯಾಕೆ ಬೆದರಿಕೆ ಹಾಕಿದ್ದರು?
ನಿರ್ಮಾಪಕ ಭರತ್ “ಶ್ರೀ ಕೃಷ್ಣಾʼ ಎಂಬ ನೂತನ ಸಿನಿಮಾವನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ನಾಯಕ ನಟನಾಗಿ ಧ್ರುವನ್ ಅವರನ್ನು ಆಯ್ಕೆ ಮಾಡೊಕೊಂಡಿದ್ದರು. ಆದರೆ, ಕೋವಿಡ್ ಬಂದ ವಿಚಾರವಾಗಿ ಸಿನಿಮಾ ಚಿತ್ರೀಕರಣ ಕೊನೆಗೊಂಡಿತ್ತು. ನಂತರ ಧ್ರುವನ್ , ದರ್ಶನ್ ಅವರ ಹತ್ತಿರ ಹೋಗಿ ಚಿತ್ರೀಕರಣ ಪ್ರಾರಂಭಿಸುವಂತೆ ಭರತ್ ಅವರಿಗೆ ಕರೆ ಮಾಡಿಸಿದ್ದರು. ಆ ಕರೆಯಲ್ಲಿ ಪ್ರಾರಂಭದಲ್ಲಿ ಕೂಲ್ ಆಗಿಯೇ ದರ್ಶನ್ ಮಾತನಾಡಿ, ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದರು. ಬಳಿಕ ಚಿತ್ರೀಕರಣಕ್ಕೆ ಒಪ್ಪದೆ ಇದ್ದಾಗ ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ನಿನ್ನನ್ನು ಇಲ್ಲದಂತೆ ಮಾಡಿ ಬಿಡುತ್ತೇನೆ ಎಂದು ಕೆಲವು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯ ಮಾತುಗಳನ್ನು ಹಾಡಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…