ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ.18ರವರೆಗೆ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರೆ ಕೊಲೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎ1 ಆರೋಪಿ ಪವಿತ್ರಾಗೌಡ ಪ್ರತ್ಯೇಕವಾಗಿ ಕೋರ್ಟ್‌ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ.18ರವರೆಗೆ ದರ್ಶನ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನೂ 14 ದಿನಗಳ ಕಾಲ ದರ್ಶನ್ ಜೈಲಿನಲ್ಲಿಯೇ ಇರಬೇಕಾಗಿದೆ.
ನಟ ದರ್ಶನ್ ಗೆಳತಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಲಾಗಿತ್ತು.
ರಾಜರಾಜೇಶ್ವರಿಯಲ್ಲಿರುವ ದರ್ಶನ್ ಮನೆಯಿಂದ ತುಸು ದೂರವೇ ಇರುವ ಶೆಡ್‌ನಲ್ಲಿಟ್ಟು ಚಿತ್ರಹಿಂಸೆ ನೀಡಲಾಗಿತ್ತು. ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಮನಬಂದಂತೆ ಹಲ್ಲೆ ಮಾಡಿ, ಕರೆಂಟ್ ಶಾಕ್ ಕೊಟ್ಟು, ಕಬ್ಬಿಣದ ಸರಳಿನಿಂದ ಹೊಡೆದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾಗಿ ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್ ಎ2 ಆರೋಪಿಯಾಗಿದ್ದು, ಪವಿತ್ರಾಗೌಡ ಎ1 ಆರೋಪಿ ಆಗಿದ್ದಾರೆ. ಇದೀಗ ಮತ್ತೆ ಡಿ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…