Mysore
17
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ದರ್ಶನ್‌ ಬಿಡುಗಡೆ: ಅಭಿಮಾನಿಗಳಲ್ಲಿ ಮನೆ ಮಾಡಿದ ಸಂಭ್ರಮ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೆರೆವಾಸ ಅನುಭವಿಸಿದ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು ಸಿಕ್ಕಿದ್ದು, ನ್ಯಾಯಮೂರ್ತಿ ವಿಶ್ವಜಿತ್‌ ಪೀಠದಿಂದ ಜಾಮೀನು ಮಂಜೂರಾಗಿದೆ.

ಇದರಿಂದ ದರ್ಶನ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಹಾಗೆಯೇ ದರ್ಶನ್‌ ಅವರ ಫೋಟೋಗೆ ಹಾಲಿನ ಅಭಿಷೇಕ ಮಾಡುವ ಮುಖಾಂತರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸ್ಯಾಂಡಲ್‌ವುಡ್‌ ನಟ, ನಟಿಯರು ಈ ಕುರಿತು ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಿರ್ದೇಶಕ ತರುಣ್‌ ಸುಧೀರ್‌, ದರ್ಶನ್‌ ಇರುವ ಪೋಸ್ಟ್‌ ಶೇರ್‌ ಮಾಡಿ ಹನುಮ ಜಯಂತಿಯ ಶುಭಾಶಯಗಳು ಎಂದು ಖುಷಿ ಹಂಚಿಕೊಂಡಿದ್ದಾರೆ. ನಟ ಧನ್ವೀರ್‌ ಅವರು ಉಸಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಪೋಸ್ಟ್‌ ಮಾಡಿದ್ದಾರೆ. ಇನ್ನು ರಕ್ಷಿತಾ ಪ್ರೇಮ್‌ ಹ್ಯಾಪಿ ನ್ಯೂಸ್‌ ಹ್ಯಾಪಿ ಡೇ ಎಂದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

Tags:
error: Content is protected !!