ರಾಜ್ಯ

ಅಭಿಮಾನಿಗಳಿಗೆ ಜೈಲಿನಿಂದಲೇ ಸಂದೇಶ ಕಳಿಸಿದ ನಟ ದರ್ಶನ್‌ : ಏನದು?

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ತುಸು ಸುದೀರ್ಘವಾಗಿಯೇ ಇರಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಗುರುವಾರ ರಾತ್ರಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಜೈಲು ಸೇರಿದ ಎರಡೇ ದಿನಕ್ಕೆ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ದರ್ಶನ್ ರವಾನಿಸಿದ್ದಾರೆ.

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ದರ್ಶನ್ ಕಳಿಸಿರುವ ಸಂದೇಶವನ್ನು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಅದರ ಪೂರ್ಣ ಸಾರಂಶ ಹೀಗಿದೆ….

‘ಎಲ್ಲರಿಗು ನಮಸ್ಕಾರ, ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ‌ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ’ ಎಂದು ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಮುಂದುವರೆದು, ದರ್ಶನ್ ಅವರ ಸಂದೇಶವನ್ನು ಪ್ರಕಟಿಸಿದ್ದಾರೆ. ‘ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ.

ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು. ನಿಮ್ಮ ಪ್ರೀತಿಯ ದಾಸ’ ಎಂದು ದರ್ಶನ್ ಸಂದೇಶ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

8 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

41 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

4 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 hours ago