ಬೆಂಗಳೂರು: ನಟ ದರ್ಶನ್‌ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 8 ರಿಂದ 10 ಜನ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಅವರನ್ನು ಶಿಫ್ಟ್ ಮಾಡಲಾಗಿದೆ. ಯಾರನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನು ಪೊಲೀಸರೇ ನಿರ್ಧಾರ ಮಾಡಿದ್ದಾರೆ ಎಂದರು.
ಇನ್ನು ದರ್ಶನ್ ಸ್ಥಳಾಂತರ ಮಾಡಿರುವುದು ಅಧಿಕಾರಿಗಳ ತೀರ್ಮಾನವಾಗಿದೆ. ಘಟನೆ ಬಳಿಕ ಪೊಲೀಸರೇ ಈ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.
ಇನ್ನು ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ಹೋದ ಬಳಿಕವೇ ಬೇಸರ ವ್ಯಕ್ತಪಡಿಸಿದ್ದು, ನನಗೆ ಜೈಲಿನ ಊಟ ಬೇಡ ಎಂದು ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಳ್ಳಾರಿ ಜೈಲಿನ ಸೆಲ್ ನೋಡುತ್ತಿದ್ದಂತೆ ತಲೆ ಚಚ್ಚಿಕೊಂಡ ದರ್ಶನ್, ಭಾರೀ ಬೇಸರದಿಂದ ಸೆಲ್ ಒಳಗಡೆ ತೆರಳಿದರು ಎಂದು ಹೇಳಲಾಗುತ್ತಿದೆ.