ರಾಜ್ಯ

ಭದ್ರತಾ ದೃಷ್ಟಿಯಿಂದ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್:‌ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು: ನಟ ದರ್ಶನ್‌ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 8 ರಿಂದ 10 ಜನ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಅವರನ್ನು ಶಿಫ್ಟ್‌ ಮಾಡಲಾಗಿದೆ. ಯಾರನ್ನು ಯಾವ ಜೈಲಿಗೆ ಶಿಫ್ಟ್‌ ಮಾಡಬೇಕೆಂಬುದನ್ನು ಪೊಲೀಸರೇ ನಿರ್ಧಾರ ಮಾಡಿದ್ದಾರೆ ಎಂದರು.

ಇನ್ನು ದರ್ಶನ್‌ ಸ್ಥಳಾಂತರ ಮಾಡಿರುವುದು ಅಧಿಕಾರಿಗಳ ತೀರ್ಮಾನವಾಗಿದೆ. ಘಟನೆ ಬಳಿಕ ಪೊಲೀಸರೇ ಈ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.

ಇನ್ನು ನಟ ದರ್ಶನ್‌ ಅವರು ಬಳ್ಳಾರಿ ಜೈಲಿಗೆ ಹೋದ ಬಳಿಕವೇ ಬೇಸರ ವ್ಯಕ್ತಪಡಿಸಿದ್ದು, ನನಗೆ ಜೈಲಿನ ಊಟ ಬೇಡ ಎಂದು ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಳ್ಳಾರಿ ಜೈಲಿನ ಸೆಲ್‌ ನೋಡುತ್ತಿದ್ದಂತೆ ತಲೆ ಚಚ್ಚಿಕೊಂಡ ದರ್ಶನ್‌, ಭಾರೀ ಬೇಸರದಿಂದ ಸೆಲ್‌ ಒಳಗಡೆ ತೆರಳಿದರು ಎಂದು ಹೇಳಲಾಗುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

1 hour ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

1 hour ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

1 hour ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

1 hour ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

1 hour ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

1 hour ago