ರಾಜ್ಯ

ʻಯಾರೂ ಕೂಡ ಜೈಲಿನ ಬಳಿ ಬರಬೇಡಿʼ ಫ್ಯಾನ್ಸ್ ಗೆ ದರ್ಶನ್ ಮನವಿ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್‌ ನಟ ದರ್ಶನ್‌ , ಪವಿತ್ರಾ ಗೌಡ ಸೇರಿ ಇತರ ಆರೋಪಿಗಳು ಈಗಾಗಲೇ ಜೈಲು ಪಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಸಹ ಚುರುಕುಗೊಳಿಸಿದ್ದು, ದರ್ಶನ್‌ ವಿರುದ್ಧ ೩೦ಕ್ಕೂ ಹೆಚ್ಚು ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಕೂಡ ಆಗಿದೆ.

ನಟ ದರ್ಶನ್‌ ಪರಪ್ಪನ ಅಗ್ರಹಾರದ ಜೈಲು ಸೇರುತ್ತಿದ್ದಂತೆ ಪ್ರತಿದಿನವೂ ಕೂಡ ಅಭಿಮಾನಿಗಳು ಜೈಲಿನ ಬಳಿ ಬಂದು ದರ್ಶನ್‌ ನೋಡಬೇಕು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡುತ್ತಿದ್ದಾರೆ. ಮಹಿಳೆಯರು, ವಿಶೇಷ ಚೇತನರು ಸೇರಿದಂತೆ ಇತರ ಅಭಿಮಾನಿಗಳು ಜೈಲಿನ  ಬಳಿ ಬಂದು ಬೀಡುಬಿಟ್ಟಿದ್ದು, ಇದೀಗ ಈ ವಿಚಾರವಾಗಿ ನಟ ದರ್ಶನ್‌ ಅವರೇ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.

ಜೈಲಾಧಿಕಾರಿಗಳ ಮೂಲಕ ಮನವಿ ಮಾಡಿರುವ ದರ್ಶನ್‌ , ʻಯಾರೂ ಕೂಡ ಜೈಲಿನ ಬಳಿ ಬರಬೇಡಿ ,  ಜೈಲಿನ ಬಳಿ ಬಂದು ನನ್ನ ಭೇಟಿಗೆ ಕಾಯುವುದು, ನನ್ನನ್ನ ಭೇಟಿ ಮಾಡಲು ಸಾಧ್ಯವಾಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ. ದಯಮಾಡಿ ಯಾರು ಜೈಲಿನ ಬಳಿ ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿʼ ಎಂದು ಕೋರಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago