Mysore
30
scattered clouds

Social Media

ಸೋಮವಾರ, 25 ಮೇ 2026
Light
Dark

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

There is no financial shortage in the government Minister G Parameshwara

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ನಟ ದರ್ಶನ್‌ ಆತ್ಮಹತ್ಯೆಗ ಯತ್ನಿಸಿದ್ದಾರೆಂಬುದು ಸಂಪೂರ್ಣ ಸುಳ್ಳು. ಜೈಲಿನಲ್ಲಿ ಆ ರೀತಿ ಘಟನೆ ನಡೆದಿಲ್ಲ ಎಂಬ ಮಾಹಿತಿ ಬಂದಿದೆ. ಜೈಲಿನ ಅಧಿಕಾರಿಗಳು ಮೌಖಿಕ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ಆ ರೀತಿಯ ಯಾವುದೇ ಘಟನೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳೇ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದ್ದೇನೆ ಎಂದು ಹೇಳಿದರು.

Tags:
error: Content is protected !!