ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿದ್ದ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
ಈ ಕುರಿತು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ನಟಿ ರಮ್ಯಾ ಅವರು, ಸುಪ್ರೀಂಕೋರ್ಟ್ ಹೊರಡಿಸಿದ ಆದೇಶದ ಟ್ವೀಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ಬರೆದುಕೊಂಡಿರುವ ನಟಿ ರಮ್ಯಾ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನು ರದ್ದು!
ಹೈಕೋರ್ಟ್‌ನ ಲೋಪಗಳನ್ನು ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ, ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರು ಕಾನೂನಿಗೆ ಮೀರಿಲ್ಲ ಎಂದು ಸ್ಪಷ್ಟಪಡಿಸಿದೆ
ಆರೋಪಿಗಳಿಗೆ ಕಸ್ಟಡಿಯಲ್ಲಿ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ ಮತ್ತು ಜೈಲು ಸೂಪರಿಂಟೆಂಡೆಂಟ್ ಅನ್ನು ಅಮಾನತುಗೊಳಿಸಬೇಕಿತ್ತು ಎಂದು ಹೇಳಿದೆ
ಇನ್ನು ಮುಂದೆ, ಅಂತಹ ಯಾವುದೇ ದುಷ್ಕೃತ್ಯವು ಕ್ರಮಕ್ಕೆ ಆಹ್ವಾನ ನೀಡುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. ಅದು ಜೈಲಿನ ಒಳಗಿನಿಂದ ತೆಗೆದ ಛಾಯಾಚಿತ್ರವಾಗಲಿ ಅಥವಾ ಸಿಗರೇಟಿನೊಂದಿಗೆ ಹುಲ್ಲುಹಾಸಿನ ಮೇಲೆ ಮಲಗಿರುವ ಆರೋಪಿಯಾಗಲಿ ಎಂದು ಬರೆದುಕೊಂಡಿದ್ದಾರೆ.





