ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ರಾಜಾತಿಥ್ಯದ ವಿಡಿಯೋ ಎಲ್ಲೆಡೆ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ನಟ ದರ್ಶನ್ ಆಪ್ತ ಧನ್ವೀರ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ನಿನ್ನೆ ಧನ್ವೀರ್ ಅವರನ್ನು ಕರೆಸಿಕೊಂಡಿದ್ದ ಸಿಸಿಬಿ ಪೊಲೀಸರು ಮೊಬೈಲ್ ವಶಕ್ಕೆ ಪಡೆದು ಸುಮಾರು ಒಂದು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ: ದರ್ಶನ್ ಹಾಸಿಗೆ, ದಿಂಬಿಗಾಗಿ ಕೋರ್ಟ್‌ಗೆ ಹೋಗ್ತಾರೆ. ಆದರೆ ಖೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಮೇಶ್ವರ್ ಸಿಟ್ಟು
ಧನ್ವೀರ್ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳ ವಿಡಿಯೋ ರಿಲೀಸ್ ಮಾಡಿದ್ರಾ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪರಿಶೀಲನೆ ವೇಳೆ ಧನ್ವೀರ್ ಮೊಬೈಲ್‌ನಲ್ಲಿ ಯಾವುದೇ ಸಾಕ್ಷಿ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಧನ್ವೀರ್ ಅವರನ್ನು ಬಿಟ್ಟು ಕಳುಹಿಸಿರುವ ಪೊಲೀಸರು ಅಗತ್ಯ ಇದ್ದರೆ ಮತ್ತೆ ವಿಚಾರಣೆಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.





