ರಾಜ್ಯ

ಸಿಸಿಬಿಯಿಂದ ನಟ ದರ್ಶನ್‌ ಆಪ್ತ ಧನ್ವೀರ್‌ ವಿಚಾರಣೆ: ಕಾರಣ ಇಷ್ಟೇ

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ರಾಜಾತಿಥ್ಯದ ವಿಡಿಯೋ ಎಲ್ಲೆಡೆ ವೈರಲ್‌ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ನಟ ದರ್ಶನ್‌ ಆಪ್ತ ಧನ್ವೀರ್‌ ಅವರನ್ನು ವಿಚಾರಣೆ ನಡೆಸಿದ್ದಾರೆ.

ನಿನ್ನೆ ಧನ್ವೀರ್‌ ಅವರನ್ನು ಕರೆಸಿಕೊಂಡಿದ್ದ ಸಿಸಿಬಿ ಪೊಲೀಸರು ಮೊಬೈಲ್‌ ವಶಕ್ಕೆ ಪಡೆದು ಸುಮಾರು ಒಂದು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ: ದರ್ಶನ್‌ ಹಾಸಿಗೆ, ದಿಂಬಿಗಾಗಿ ಕೋರ್ಟ್‌ಗೆ ಹೋಗ್ತಾರೆ. ಆದರೆ ಖೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಮೇಶ್ವರ್‌ ಸಿಟ್ಟು

ಧನ್ವೀರ್‌ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳ ವಿಡಿಯೋ ರಿಲೀಸ್‌ ಮಾಡಿದ್ರಾ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪರಿಶೀಲನೆ ವೇಳೆ ಧನ್ವೀರ್‌ ಮೊಬೈಲ್‌ನಲ್ಲಿ ಯಾವುದೇ ಸಾಕ್ಷಿ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಧನ್ವೀರ್‌ ಅವರನ್ನು ಬಿಟ್ಟು ಕಳುಹಿಸಿರುವ ಪೊಲೀಸರು ಅಗತ್ಯ ಇದ್ದರೆ ಮತ್ತೆ ವಿಚಾರಣೆಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

8 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

27 mins ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

35 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

1 hour ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

1 hour ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

2 hours ago