ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ.
57ನೇ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿ ವಿಚಾರಣೆಯ ಆದೇಶವನ್ನು ಅಕ್ಟೋಬರ್.9ಕ್ಕೆ ಕಾಯ್ದಿರಿಸಿದೆ.
ಇದನ್ನು ಓದಿ : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳುವು ಪ್ರಕರಣ: ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
ಕೋರ್ಟ್ ಆದೇಶದ ಹೊರತಾಗಿಯೂ ದರ್ಶನ್‌ಗೆ ಯಾವುದೇ ಸವಲತ್ತುಗಳನ್ನು ಜೈಲಾಧಿಕಾರಿಗಳು ನೀಡಿಲ್ಲ. ಈ ಮೂಲಕ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಜೈಲಿನ ನಿಯಮದ ಪ್ರಕಾರ ನಡೆದುಕೊಳ್ಳಲಾಗಿದೆ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದಾರೆ. ಈ ವೇಲೆ ದರ್ಶನ್ ಪರ ವಕೀಲ ಸುನಿಲ್, ಕೋರ್ಟ್ ಆದೇಶ ನೀಡಿದರೂ ದರ್ಶನ್‌ಗೆ ಯಾವುದೇ ಸವಲತ್ತು ನೀಡುತ್ತಿಲ್ಲ.
ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದರೂ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಯಾವುದೇ ಸೌಲಭ್ಯ ನೀಡಿಲ್ಲ. ಇಡೀ ದೇಶದಲ್ಲಿಯೇ ಪಾಲನೆಯಾಗದಿರುವ ನಿಯಮ ದರ್ಶನ್‌ಗೆ ಅನ್ವಯವಾಗಿದೆ. ಕೋರ್ಟ್ ಆದೇಶವನ್ನು ಕೂಡ ಪಾಲಿಸದಿರುವುದು ನೋವುಂಟು ಮಾಡಿದೆ ಎಂದು ವಾದ ಮಂಡಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…