ರಾಜ್ಯ

ನಟ ದರ್ಶನ್‌ ಅರ್ಜಿ ವಿಚಾರಣೆ : ಸೆ.19ಕ್ಕೆ ತೀರ್ಪು

ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಚಿತ್ರನಟ ದರ್ಶನ್ ಗೆ ಕನಿಷ್ಠ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಸೆಪ್ಟೆಂಬರ್ 19 ರಂದು ಆದೇಶವನ್ನು ನೀಡಲಿದೆ.

ತಮಗೆ ಜೈಲಿನಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಕೋರಿ ದರ್ಶನ್ ಪರ ವಕೀಲರು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಮೇಲ್ಮನೆ ಅರ್ಜಿ ಸಲ್ಲಿಸಿದ್ದರು. ಬುದುವಾರ ಅರ್ಜಿ ವಿಚಾರ ನಡೆಸಿದ ನ್ಯಾಯಾಲಯ ಎರಡು ಕಡೆ ವಾದ -ಪ್ರತಿವಾದವನ್ನು ಆಲಿಸಿ ಅಂತಿಮ ಆದೇಶವನ್ನು ಸೆಪ್ಟೆಂಬರ್ 19ಕ್ಕೆ ಕಾಯ್ದಿರಿತಿದೆ.

ತಮಗೆ ಜೈಲಿನಲ್ಲಿ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ನೀಡಬೇಕೆಂದು ದರ್ಶನ್ ಅರ್ಜಿಯಲ್ಲಿ ಕೋರಿದ್ದಾರೆ. ಆದರೆ ಇದಕ್ಕೆ ಸರ್ಕಾರಿ ಪರ ವಕೀಲರು ವಿರೋಧ ವ್ಯಕ್ತಪಡಿಸಿ ಜೈಲಿನ ನಿಯಮಗಳ ಪ್ರಕಾರವೇ ಆರೋಪಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದೆ. ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದ ಅರ್ಜಿಯನ್ನು ಸಲ್ಲಿಸಿದ್ದಾರೆ. ಕೋರ್ಟ್‌ನ ಆದೇಶದ ನಂತರವೂ ಸೂಕ್ತ ಸೌಲಭ್ಯಗಳನ್ನು ಒದಗಿಸದಿರುವುದಕ್ಕೆ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಜೈಲಿನ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿರುವ ದರ್ಶನ್, ಕನಿಷ್ಠ ಸೌಲಭ್ಯಗಳ ಕೊರತೆಯಿಂದ ಕಷ್ಟ ಅನುಭವಿಸುತ್ತಿದ್ದಾರೆ. ಕೋರ್ಟ್‌ನ ಆದೇಶದಂತೆ ಜೈಲಾಧಿಕಾರಿಗಳು ಜಮ್ಖಾನ, ದಿಂಬು ಮತ್ತು ವಾಕಿಂಗ್‌ಗೆ ಅವಕಾಶ ನೀಡಿದ್ದಾರೆ. ಆದರೆ, ದರ್ಶನ್‌ಗೆ ಹಾಸಿಗೆ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕಾಗಿ ಅವರು ಮತ್ತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲ ಸುನೀಲ್ ಕುಮಾರ್, ಜೈಲಿನಲ್ಲಿ 14 ದಿನಗಳಿಗಿಂತ ಹೆಚ್ಚು ಕಾಲ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಿರುವುದು ಜೈಲು ನಿಯಮಾವಳಿಗಳ ಉಲ್ಲಂಘನೆ ಎಂದು ವಾದಿಸಿದ್ದಾರೆ. ದರ್ಶನ್ ತಮ್ಮ ಅರ್ಜಿಯಲ್ಲಿ, “ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನೂ ಒದಗಿಸಿಲ್ಲ. ರಾತ್ರಿಯಿಡೀ ಮಲಗಲು ಸಾಧ್ಯವಾಗುತ್ತಿಲ್ಲ. ಹಾಸಿಗೆ, ದಿಂಬು ಒದಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಸೆಷನ್ಸ್ ಕೋರ್ಟ್, ಜೈಲು ಮ್ಯಾನ್ಯುಯಲ್‌ನಂತೆ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಆದೇಶಿಸಿತ್ತು. ಆದರೆ, ಆದೇಶದ ಜಾರಿಯ ಬಗ್ಗೆ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕೀಲ ಸುನೀಲ್ ಕುಮಾರ್ ಕೋರ್ಟ್‌ಗೆ ವಾದ ಮಂಡಿಸಿದ್ದು, ಜೈಲಿನ ಅಧಿಕಾರಿಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ. ಕ್ವಾರಂಟೈನ್ ಸೆಲ್‌ನಲ್ಲಿ ಒಂದು ತಿಂಗಳಿಗಿಂತಲೂ ಹೆಚ್ಚು ಕಾಲ ಇರಿಸಿರುವುದು ನಿಯಮಗಳ ಉಲ್ಲಂಘನೆಯಾಗಿದೆ.

ಮತ್ತೊಂದೆಡೆ, ಜೈಲಾಧಿಕಾರಿಗಳು ಈ ಆರೋಪಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದ್ದಾರೆ. ಆದರೆ, ದರ್ಶನ್‌ಗೆ ಸೂಕ್ತ ಸೌಲಭ್ಯ ಒದಗಿಸದಿರುವುದಕ್ಕೆ ಯಾವುದೇ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago