ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತೆ ಜೈಲು ಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲುಪಾಲಾದ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ಫೋಟೋದಲ್ಲಿ ನಟ ದರ್ಶನ್ ಏಕಾಂಗಿಯಾಗಿ ನಿಂತಿದ್ದಾರೆ.
ಇದಕ್ಕೆ ವಿಜಯಲಕ್ಷ್ಮೀ ಹಾರ್ಟ್ ಬ್ರೇಕ್ ಇಮೋಜಿ ಕೂಡ ಹಾಕಿದ್ದಾರೆ. ವಿಜಯಲಕ್ಷ್ಮೀ ಪೋಸ್ಟ್‌ಗೆ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದು, ಮುಂದಿನ ದಿನಗಳಲ್ಲಿ ಅಣ್ಣನಿಗೆ ಒಳ್ಳೆಯ ಕಾಲ ಬರುತ್ತದೆ. ಯೋಚಿಸಬೇಡಿ ಎಂದು ಧೈರ್ಯ ಹೇಳುತ್ತಿದ್ದಾರೆ.





