ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣಗಳು ದಾಖಲಾಗಿವೆ.
ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್, ಭೋಜರಾಜ್ ರೈ ಹಾಗೂ ನಟ ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ನೀಡಿದ ದೂರುಗಳ ಆಧಾರದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಈ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಧನ್ವೀರ್ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ವರದಿ ತಿಳಿಸಿದೆ.




