ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಮೇ.26ರಂದು ರಾತ್ರಿ ಪ್ರಶಾಂತ್ ಪೂಜಾರ್ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಹಾಗೂ ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ತೀವ್ರ ಹಲ್ಲೆ ನಡೆಸಿದ್ದರು.
ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ ಎಂಬುವವನೇ ಹಲ್ಲೆ ನಡೆಸಿದ್ದು, ನಾಗೇಂದ್ರ ಧ್ರುವ ಸರ್ಜಾಗೆ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದನು.
ಹಲ್ಲೆ ನಡೆಸಲು ಧ್ರುವಸರ್ಜಾ ಮ್ಯಾನೇಜರ್ ಅಶ್ವಿನ್ ಎಂಬುವವನು ನಾಗೇಂದ್ರಗೆ ಸಾಥ್ ಕೊಟ್ಟಿದ್ದ ಎನ್ನಲಾಗಿದೆ.
ಹಲ್ಲೆಗೊಳಗಾದ ಪ್ರಶಾಂತ್ ಧ್ರುವ ಸರ್ಜಾಗೆ ತುಂಬಾ ಆಪ್ತರಾಗಿದ್ದರು. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್‌ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ.
ಇದೇ ಕಾರಣಕ್ಕೆ ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಅಶ್ವಿನ್‌ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.





