ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ ಭೇಟಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ.
ಇಲ್ಲಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು(ಫೆಬ್ರವರಿ.6) ನಟ ಸುದೀಪ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಅವರು ದಿಢೀರ್ ಭೇಟಿ ನೀಡಿದ್ದು, ಕೆಲಕಾಲ ಡಿಕೆಶಿ ಅವರೊಂದಿಗೆ ಮಾತುಕತೆ ಮಾಡಿದ್ದಾರೆ.
ಇನ್ನೂ ಫೆಬ್ರವರಿ.8 ರಿಂದ ಸಿಸಿಎಲ್(CCL) ಪಂದ್ಯ ಆರಂಭವಾಗಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲು ಬಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ನಟ ಸುದೀಪ್ ಭೇಟಿ ಬಳಿಕ ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸುದೀಪ್ ಅವರು ತಮ್ಮ ನಿವಾಸಕ್ಕೆ ಸಿನಿಮಾದ ಬಗ್ಗೆ ಮಾತುಕತೆ ನಡೆಸಲು ಬಂದಿದ್ದರು ಎಂದು ಹೇಳಿದ್ದಾರೆ.
ಈ ಮಧ್ಯೆ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂಬ ಗಾಸಿಪ್ ಹರಡಿತ್ತು. ಆದರೆ ಇದೀಗ ಡಿ.ಕೆ.ಶಿವಕುಮಾರ್ ಅವರ ಮನೆಗೆ ನಟ ಸುದೀಪ್ ಅವರು ಭೇಟಿ ನೀಡಿರುವುದು ಕುತೂಹಲವನ್ನುಂಟು ಮಾಡಿದೆ.





