ರಾಜ್ಯ

ಡಿಸಿಎಂ ಡಿಕೆಶಿ ನಿವಾಸಕ್ಕೆ ನಟ ಕಿಚ್ಚ ಸುದೀಪ ಭೇಟಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ ಭೇಟಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ.

ಇಲ್ಲಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಇಂದು(ಫೆಬ್ರವರಿ.6) ನಟ ಸುದೀಪ ಮತ್ತು ನಿರ್ದೇಶಕ ಅನೂಪ್‌ ಭಂಡಾರಿ ಅವರು ದಿಢೀರ್‌ ಭೇಟಿ ನೀಡಿದ್ದು, ಕೆಲಕಾಲ ಡಿಕೆಶಿ ಅವರೊಂದಿಗೆ ಮಾತುಕತೆ ಮಾಡಿದ್ದಾರೆ.

ಇನ್ನೂ ಫೆಬ್ರವರಿ.8 ರಿಂದ ಸಿಸಿಎಲ್‌(CCL) ಪಂದ್ಯ ಆರಂಭವಾಗಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಆಹ್ವಾನ ನೀಡಲು ಬಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ನಟ ಸುದೀಪ್‌ ಭೇಟಿ ಬಳಿಕ ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸುದೀಪ್‌ ಅವರು ತಮ್ಮ ನಿವಾಸಕ್ಕೆ ಸಿನಿಮಾದ ಬಗ್ಗೆ ಮಾತುಕತೆ ನಡೆಸಲು ಬಂದಿದ್ದರು ಎಂದು ಹೇಳಿದ್ದಾರೆ.

ಈ ಮಧ್ಯೆ ಇತ್ತೀಚೆಗೆ ನಟ ಕಿಚ್ಚ ಸುದೀಪ್‌ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂಬ ಗಾಸಿಪ್‌ ಹರಡಿತ್ತು. ಆದರೆ ಇದೀಗ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ನಟ ಸುದೀಪ್‌ ಅವರು ಭೇಟಿ ನೀಡಿರುವುದು ಕುತೂಹಲವನ್ನುಂಟು ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 mins ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

33 mins ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

1 hour ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

2 hours ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

2 hours ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

2 hours ago