ಬೆಂಗಳೂರು: ನಾಳೆ ಬೆಳಿಗ್ಗೆ 11 ಗಂಟೆಗೆ ಹುಟ್ಟೂರಿನಲ್ಲಿ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಲಾಗಿದೆ.
ಇನ್ನು ಸರೋಜಾದೇವಿ ಅವರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಟ ಜಗ್ಗೇಶ್, ನಟ ಉಪೇಂದ್ರ ಸೇರಿದಂತೆ ಹಲವು ಚಿತ್ರರಂಗದ ನಟ ನಟಿಯರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.





