ರಾಜ್ಯ

ಗೀತಾ ನಾಮಪತ್ರ ಸಲ್ಲಿಕೆ: ಶಿವಮೊಗ್ಗ ಜನತೆಗೆ ಧನ್ಯವಾದ ತಿಳಿಸಿದ ಶಿವಣ್ಣ

ಶಿವಮೊಗ್ಗ: ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದು, ಏಪ್ರಿಲ್​ 15 ಅವರು ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಿಮ್ಮನೆ ರತ್ನಾಕರ್​ ಮುಂತಾದವರು ಗೀತಾಗೆ ಸಾಥ್​ ನೀಡಿದ್ದಾರೆ. ಗೀತಾ ಪರವಾಗಿ ಅವರ ಪತಿ ಶಿವರಾಜ್​ಕುಮಾರ್​ ಅವರು ಜಿಲ್ಲೆಯಾದ್ಯಂತ ಪ್ರಚಾರ ಮಾಡುತ್ತಿದ್ದಾರೆ.

ಗೀತಾ ನಾಮಪತ್ರ ಸಲ್ಲಿಸಿದ ಬಳಿಕ ಶಿವರಾಜ್‌ ಕುಮಾರ್‌ ಪ್ರತಿಕ್ರಿಯೆ ನೀಡಿ, ಶಿವಮೊಗ್ಗದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಇಷ್ಟೊಂದು ಜನರು ಪ್ರೀತಿ-ವಿಶ್ವಾಸದಿಂದ ಬಂದಿರುವುದು ನೋಡಿದರೆ ಶಿವಮೊಗ್ಗದಲ್ಲಿ ಬದಲಾವಣೆ ಬೇಕು ಅಂತ ಅವರೆಲ್ಲರೂ ಬಯಸಿದ್ದಾರೆ. ಜನ ನಗುವಿನ ಮುಖದಲ್ಲಿ ಬದಲಾವಣೆ ಕೇಳುತ್ತಿದ್ದಾರೆ ಎಂಬುದು ನನ್ನ ಭಾವನೆ. ನಿಮ್ಮಲ್ಲರ ಆಶೀರ್ವಾದ ಬೇಕು. ಗೀತಾ ಖಂಡಿತಾ ಗೆಲ್ಲುತ್ತಾರೆ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇಂದು ನಾನು ನಾಮಪತ್ರ ಸಲ್ಲಿಸಿ ಬಂದಿದ್ದೇನೆ. ನಮ್ಮ ಪಕ್ಷದ ಡಿ.ಕೆ. ಶಿವಕುಮಾರ್​ ಅವರಿಗೆ ಧನ್ಯವಾದ ಹೇಳುತ್ತೇನೆ. ಎಲ್ಲ ಕಾರ್ಯಕರ್ತರಿಗೆ ನನ್ನ ನಮಸ್ಕಾರ. ಮತದಾರರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಅವರೆಲ್ಲರ ಆಶೀರ್ವಾದ ನಮ್ಮ ಪಕ್ಷ ಮತ್ತು ನನ್ನ ಮೇಲೆ ಇರಲಿ ಅಂತ ಕೇಳಿಕೊಳ್ಳುತ್ತೇನೆ ಎಂದು ಗೀತಾ ಶಿವರಾಜ್​ಕುಮಾರ್​ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

48 mins ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

2 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

2 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

2 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

3 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

6 hours ago