Mysore
20
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

ನಟ ಉಪೇಂದ್ರ ದಂಪತಿ ಮೊಬೈಲ್‌ ಹ್ಯಾಕ್‌ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ಹ್ಯಾಕ್‌ ಆಗಿತ್ತು. ಕಿಡಿಗೇಡಿಗಳು ದಂಪತಿಯ ಫೋನ್‌ ನಂಬರ್‌ ಹ್ಯಾಕ್‌ ಮಾಡಿದ್ದು, ಹಣ ಹಾಕುವಂತೆ ಮೆಸೇಜ್‌ಗಳ ಮೂಲಕ ಕೇಳಿದ್ದರು.

ಈ ಬಗ್ಗೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ವಿಡಿಯೋ ಮೂಲಕ ಮಾಹಿತಿ ನೀಡಿದ್ದು, ನನ್ನ ಹಾಗೂ ಪತ್ನಿ ಪ್ರಿಯಾಂಕಾ ಅವರ ಫೋನ್ ನಂಬರ್‌ಗಳನ್ನು ಕಿಡಿಗೇಡಿಗಳು ಹ್ಯಾಕ್‌ ಮಾಡಿದ್ದಾರೆ. ಫೋನ್‌ ಮೂಲಕ ಬರಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅರ್ಜೆಂಟಾಗಿ ಹಣ ನೀಡುವಂತೆ ಮೆಸೇಜ್‌ ಕಳುಹಿಸುತ್ತಿದ್ದಾರೆ.

ಇದನ್ನು ಓದಿ: ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ನಂಬರ್‌ ಹ್ಯಾಕ್‌

ನಮ್ಮ ಫೋನ್‌ ನಂಬರ್‌ಗಳಿಂದ ಕರೆ ಅಥವಾ ಮೆಸೇಜ್‌ ಬಂದರೆ ದಯವಿಟ್ಟು ಯಾರೂ ಹಣ ಹಾಕಬೇಡಿ. ಫೋನ್‌ ನಂಬರ್‌ ಹ್ಯಾಕ್‌ ಆಗಿದೆ ಎಂದು ಮನವಿ ಮಾಡಿದ್ದರು. ಅಲ್ಲದೇ ಫೋನ್‌ ನಂಬರ್‌ ಹ್ಯಾಕ್‌ ಆಗಿರುವ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಬಿಹಾರಿ ಹ್ಯಾಕರ್‌ಗಳು ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಅಧಿಕಾರಿಗಳು ವಿಶೇಷ ತಂಡವನ್ನು ಬಿಹಾರಕ್ಕೆ ಕಳುಹಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲಕ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ವಿಕಾಸ್‌ ಕುಮಾರ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ತನಿಖೆ ಮುಂದುವರಿದಿದೆ.

Tags:
error: Content is protected !!